ಗುರಿ ಗುರುವಿಲ್ಲದ ಜೀವನ ನಿರರ್ಥಕ: ರಂಭಾಪುರಿಶ್ರೀ
ವೀರಮಾರ್ಗ ನ್ಯೂಸ್ ಕಲಕೇರಿ : ಬಾಳೆಗೊಂದು ಗೊನೆಯಿರುವಂತೆ ಬಾಳಿಗೊಂದು ಗುರಿಯಿರಬೇಕು. ಗುರಿ ಇಲ್ಲದ ಗುರು ಇಲ್ಲದ ಮಾನವ ಜೀವನ ನಿರರ್ಥಕ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಬುಧವಾರ ಕಲಕೇರಿ ಸುಕ್ಷೇತ್ರದ ಶ್ರೀ ಗುರು ಮರುಳಾರಾಧ್ಯ ಸಂಸ್ಥಾನ ಹಿರೇಮಠದಲ್ಲಿ ಜರುಗಿದ ಪುರಾಣ ಮಂಗಲ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಸಕಲ ಜೀವಾತ್ಮರಿಗೆ ಒಳಿತನ್ನೇ ಬಯಸಿದ ಧರ್ಮ ವೀರಶೈವ. ಈ ಧರ್ಮದ ತತ್ವ ಸಿದ್ಧಾಂತಗಳು ಜೀವನ ವಿಕಾಸಕ್ಕೆ ಅಡಿಪಾಯವಾಗಿವೆ. ಸ್ವಾರ್ಥ ಗೆದ್ದವನು ಶಾಂತಿ ಪಡೆದವನು ಮತ್ತು…