ಪ್ರತಿ ಲೀಟರ್ ಡೀಸೆಲ್ ದರ 2 ರೂ ಏರಿಕೆ, ಮದ್ಯರಾತ್ರಿಯಿಂದಲೇ ಜಾರಿ

ಪ್ರತಿ ಲೀಟರ್ ಡೀಸೆಲ್ ದರ 2 ರೂ ಏರಿಕೆ, ಮದ್ಯರಾತ್ರಿಯಿಂದಲೇ ಜಾರಿ
ವೀರಮಾರ್ಗ ನ್ಯೂಸ್ ಬೆಂಗಳೂರು :
ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ರಾಜ್ಯ ಸರ್ಕಾರ ಪ್ರತಿ ಲೀಟರ್ ಡೀಸೆಲ್‌ಗೆ ಎರಡು ರೂ ಏರಿಕೆ ಮತ್ತೊಂದು ಶಾಕ್ ನೀಡಿದೆ.
ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.
ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44% ರಿಂದ 21.17% ಗೆ ಏರಿಕೆ ಮಾಡಲಾಗಿದೆ. ಸದ್ಯ ರಾಜ್ಯದಲ್ಲಿ ಪ್ರತಿ ಲೀಟರ್ ಡೀಸೆಲ್‌ಗೆ 88.93 ರೂ. ದರವಿದೆ. ತೆರಿಗೆ ಏರಿಕೆಯಿಂದ ದರ 90.93 ರೂ.ಗೆ ಆಗಲಿದೆ.
ಪೆಟ್ರೋಲ್ ಮೇಲೆ ಮಾರಾಟ ತೆರಿಗೆಯನ್ನು ಏರಿಸದ ಕಾರಣ ಪ್ರತಿ ಲೀಟರ್ ಪೆಟ್ರೋಲ್ ದರ 102. 84 ರೂ. ನಷ್ಟಿದೆ.

ಡೀಸೆಲ್ ದರ ಏರಿಕೆಯಿಂದಾಗಿ ಸರಕು ಸಾಗಾಣಿಕೆ ಮಾಡುವ ವಾಹನಗಳಾದ ಟ್ರಕ್, ಲಾರಿಗಳು ಡೀಸೆಲ್ ಬಳಸುವ ಕಾರಣ ಮುಂದಿನ ದಿನಗಳಲ್ಲಿ ಇದರ ನೇರ ಪರಿಣಾಮ ದಿನ ಬಳಕೆಯ ವಸ್ತುಗಳ ಮೇಲೆ ತಟ್ಟಲಿದೆ.
ಇದರಿಂದಾಗಿ ದಿನ ಬಳಕೆ ತರಕಾರಿ, ಆಹಾರ ವಸ್ತುಗಳ ಬೆಲೆಯೂ ಏರಿಕೆ ಆಗಲಿದೆ.


ಇಂದಿನಿಂದ ಹಾಲು, ಮೊಸರು ಹಾಗೂ ವಿದ್ಯುತ್ ದರ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಡೀಸೆಲ್ ದರವೂ ಹೆಚ್ಚಳವಾಗಿದಡ. ಡೀಸೆಲ್ ದರ ಏರಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *