ಸಾಲುಮರದ ತಿಮ್ಮಕ್ಕ ಸ್ಮರಣಾರ್ಥ ಸಸಿ ನೆಡುವ ಕಾರ್ಯಕ್ರಮ…

ಸಾಲುಮರದ ತಿಮ್ಮಕ್ಕ ಸ್ಮರಣಾರ್ಥ KRS ಪಕ್ಷದಿಂದ ಸಸಿ ನೆಡುವ ಕಾರ್ಯಕ್ರಮ.
(ಪಂಚಾಯಿತಿ ವ್ಯಾಪ್ತಿಯಲ್ಲಿ ಗಿಡ ಮರಗಳ ನೆಡುವ ಆದೇಶ ಸರ್ಕಾರದಿಂದ ಹೊರಡಿಸಿ–ನಿರುಪಾದಿ ಕೆ ಗೋಮರ್ಸಿ ಆಗ್ರಹ.)

ಸಿಂಧನೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕಳ ಸ್ಮರಣಾರ್ಥವಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಿಂಧನೂರು ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿವಧ ರೀತಿಯ ಹಲವು ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆಆರ್‌ಎಸ್ ಪಕ್ಷದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಯವರು ಸಾಲುಮರದ ತಿಮ್ಮಕ್ಕ ತನ್ನ ಇಡೀ ಜೀವನವನ್ನು ನಾಡಿನ ಪರಿಸರಕ್ಕಾಗಿ ಮುಡುಪಾಗಿಟ್ಟು ಸುಮಾರು ಎಂಟು ಸಾವಿರಕ್ಕೂ ಹೆಚ್ಚು ಮರ ಗಿಡಗಳನ್ನು ನೆಟ್ಟು ಅವುಗಳನ್ನು ತನ್ನ ಮಕ್ಕಳಂತೆ ಪಾಲನೆ,ಪೋಷಣೆ ಮಾಡಿ ನಮಗೆ ನೀಡಿ ಹೋಗಿದ್ದಾರೆ. ಅವರ ಸೇವೆಯ ಹಾದಿಯಲ್ಲಿ ಪರಿಸರ ಉಳಿಸಿ ಬೆಳೆಸುವ ಕೆಲಸಕ್ಕೆ ಯುವಕರು ಮುಂದಾಗಬೇಕು ಹಾಗೂ ಸರ್ಕಾರದ ವತಿಯಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಐದು ಸಾವಿರ ಮರಗಳು ನೆಡುವಂತಹ ಹಾಗೂ ಜಾಗೃತಿ ಕಾರ್ಯಕ್ರಮದ ಆದೇಶವನ್ನು ಹೊರಡಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು. ಪ್ರಸ್ತುತದ ಆಧುನಿಕ ಯುಗದಲ್ಲಿ ಅಭಿವೃದ್ಧಿಯ ನೆಪದಲ್ಲಿ ದಿನನಿತ್ಯ ಸಾವಿರಾರು ಗಿಡ-ಮರಗಳ ಮಾರಣಹೋಮ ನಡೆಯುತ್ತಿದೆ.ಪರಿಸರದ ನಾಶದಿಂದಾಗಿ ಪ್ರಕೃತಿ ವಿಕೋಪಗಳು ಸಂಭವಿಸುತ್ತಿದ್ದು ಇದರಿಂದ ಜನರ ಜೀವನಕ್ಕೆ ಅಪಾಯ ಸೃಷ್ಟಿಯಾಗುತ್ತಿದೆ ಈ ಸುಂದರವಾದ ಪರಿಸರವನ್ನು ನಾವು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವಂತಹ ಕೆಲಸಕ್ಕೆ ಮುಂದಾಗಬೇಕು ಸಾಲುಮರದ ತಿಮ್ಮಕ್ಕ ನಮಗೆ ಮಾದರಿಯಾಗಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಶರಣಪ್ಪ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರು ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ ಮಲ್ಲಾಪುರ ಪಕ್ಷದ ರಾಜ್ಯ ಯುವ ಘಟಕದ ಕಾರ್ಯದರ್ಶಿ ದ್ಯಾವಣ್ಣ ಪುಲದಿನ್ನಿ,ಜಿಲ್ಲಾ ಉಪಾಧ್ಯಕ್ಷ ಕೃಷ್ಣ ಸುಕಲ್ಪೇಟೆ, ಮುಖಂಡರಾದ ಮುರ್ತುಜಾ, ಖಾಜಾಸಾಬ್,ಮೆಹಬೂಬ್ ಸಾಬ್,ಹನುಮಂತ, ಲಾಲ್ ಹುಸೇನ,ಸೇರಿದಂತೆ ಅನೇಕರು ಭಾಗವಹಿಸಿದ್ದರು.