ಸೆಲ್ಫಿ, ಮೋಜು, ಈಜು… ಕ್ಷಣಾರ್ಧದಲ್ಲಿ ದುರಂತ!

ವೀರಮಾರ್ಗ ನ್ಯೂಸ್ :ಬೆಂಗಳೂರು : ಬೆಟ್ಟಿಂಗ್ ಚಟಕ್ಕೆ ಪತ್ನಿಯನ್ನೇ ಬರ್ಬರವಾಗಿ ಹ*ತ್ಯೆ ಮಾಡಿದ ಪತಿ
ಬೆಂಗಳೂರು ನಗರದ ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.

ಬೆಟ್ಟಿಂಗ್ ಚಟಕ್ಕೆ ಬಿದ್ದಿದ್ದ ಪತಿಯೊಬ್ಬ ತನ್ನ ಪತ್ನಿಯನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಮಹಾದೇವಪುರ ಪೊಲೀಸ್ ಠಾಣೆಯಲ್ಲಿ
ಹೋಂ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುಳಾ (32) ಕೊ*ಲೆಯಾದವರು ಪತಿ ಪ್ರದೀಪ್ ಪತ್ನಿಯನ್ನು ಬರ್ಬರವಾಗಿ ಹ*ತ್ಯೆ ಮಾಡಿರುವ ಆರೋಪ ಎದುರಿಸುತ್ತಿದ್ದಾನೆ. ನಗರದ ಪುಷ್ಪಾಂಜಲಿ ಥಿಯೇಟರ್ ಸಮೀಪದ ಮನೆಯಲ್ಲಿ ನಿನ್ನೆ ರಾತ್ರಿ ಸುಮಾರು 9 ಗಂಟೆ ವೇಳೆಗೆ ಘಟನೆ ನಡೆದಿದೆ. ಆರೋಪಿ ಪ್ರದೀಪ್ ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದಿದ್ದ ಎನ್ನಲಾಗಿದೆ. ಹತ್ಯೆಗೂ ಮುನ್ನ ವಿಡಿಯೋ ದಾಖಲಿಸಿಕೊಂಡಿದ್ದ ಆತ ಬೆಟ್ಟಿಂಗ್ ಚಟದಿಂದ ನನ್ನ ಹೆಂಡತಿ ಮತ್ತು ಮಕ್ಕಳು ಬೀದಿಗೆ ಬಂದಿದ್ದಾರೆ. ನಾನು ಸಾ*ಯುತ್ತೇನೆ ನನ್ನ ಹೆಂಡತಿಯೂ ಸಾಯುತ್ತಾಳೆ ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಇದೇ ವೇಳೆ ತನ್ನ ಪತ್ನಿ ಮಂಜುಳಾ ಅತ್ತೆ ಹಾಗೂ ನಾದಿನಿಯ ಪ್ರಭಾವದಿಂದ ಹಾಳಾಗಿದ್ದಾಳೆ ಎಂದು ಕೂಡ ವಿಡಿಯೋದಲ್ಲಿ ಆರೋಪಿಸಿದ್ದಾನೆ ಎಂದು ತಿಳಿದುಬಂದಿದೆ. ವಿಡಿಯೋ ದಾಖಲಿಸಿದ ಬಳಿಕ ಪತ್ನಿಗೆ ಚಾಕುವಿನಿಂದ ಇರಿದು ಹ*ತ್ಯೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ. ಘಟನೆಯ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃ*ತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಮಹಾದೇವಪುರ ಪೊಲೀಸರು ಪರಾರಿಯಾಗಿರುವ ಆರೋಪಿ ಪ್ರದೀಪ್ ಬಂಧನಕ್ಕೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಧರ್ಮಸ್ಥಳದಿಂದ ವಾಪಸ್ ಬರುತ್ತಿದ್ದ ಸ್ನೇಹಿತರಿಗೆ ಕಾದಿತ್ತು ಸಾವು; ಹೇಮಾವತಿ ಹಿನ್ನೀರಿನಲ್ಲಿ ಮೂವರು ಜಲಸಮಾಧಿ!”

ಸೆಲ್ಫಿ, ಮೋಜು, ಈಜು… ಕ್ಷಣಾರ್ಧದಲ್ಲಿ ದುರಂತ! ಹೇಮಾವತಿ ಹಿನ್ನೀರಿನಲ್ಲಿ ಮೂವರು ಯುವಕರು ಮುಳುಗಿ ಸಾವು

ಹಾಸನ: ಪ್ರವಾಸದ ಖುಷಿ ಕ್ಷಣಾರ್ಧದಲ್ಲಿ ಶೋಕವಾಗಿ ಮಾರ್ಪಟ್ಟ ಘಟನೆ ಹಾಸನ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಶೆಟ್ಟಿಹಳ್ಳಿ ಚರ್ಚ್ ಬಳಿ ನಡೆದಿದೆ. ಧರ್ಮಸ್ಥಳ ಪ್ರವಾಸ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಮೂವರು ಯುವಕರು ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಬೆಂಗಳೂರು ಮೂಲದ 10 ಮಂದಿ ಸ್ನೇಹಿತರ ತಂಡ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳಿತ್ತು. ಶ್ರೀ ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ವಾಪಸಾಗುವ ವೇಳೆ ಗೊರೂರು ಸಮೀಪದ ಐತಿಹಾಸಿಕ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಬಂದಿದ್ದರು. ಈ ವೇಳೆ ಚರ್ಚ್ ಸುತ್ತಲಿನ ಹಿನ್ನೀರನ್ನು ಕಂಡ ಯುವಕರು ಈಜಲು ನೀರಿಗೆ ಇಳಿದಿದ್ದಾರೆ.

ಆದರೆ ನೀರಿನ ಆಳದ ಅರಿವಿಲ್ಲದೇ ಹಾಗೂ ಈಜು ಬಾರದಿದ್ದರೂ ಹಿನ್ನೀರಿಗೆ ಇಳಿದ ಪರಿಣಾಮ ಬೆಂಗಳೂರು ಮೂಲದ ಚರಣ್ (20), ಮಿಲನ್ (23) ಹಾಗೂ ಮಣಿಕಂಠ (20) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಯುವಕರು ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಸ್ನೇಹಿತರು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ನಿರ್ಜನ ಪ್ರದೇಶವಾಗಿದ್ದರಿಂದ ತಕ್ಷಣದ ನೆರವು ಸಿಗದೆ, ಮೂವರು ಗೆಳೆಯರ ಕಣ್ಣೆದುರೇ ದುರಂತ ಸಂಭವಿಸಿದೆ.

ಮಾಹಿತಿ ತಿಳಿದ ತಕ್ಷಣ ಗೊರೂರು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದರು. ಈಜುಗಾರರ ನೆರವಿನಿಂದ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವರದಿ: ಚನ್ನೇಶ್ ಕೆ ಎಂ
ಬೆಂಗಳೂರು