ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಪ್ರೋತ್ಸಾಹಬೇಕು : ದುಂಡಿಗೌಡ್ರ

ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಪ್ರೋತ್ಸಾಹಬೇಕು : ದುಂಡಿಗೌಡ್ರ
ವೀರಮಾರ್ಗ ನ್ಯೂಸ್ ಶಿಗ್ಗಾವಿ :
ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಪ್ರತಿವರ್ಷ ನಮ್ಮ ಸೇವಾ ಸಂಸ್ಥೆ ಆಶ್ರಯದಲ್ಲಿ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಿ ನುರಿತ ತರಬೇತಿದಾರರಿಂದ ತರಬೇತಿ ನೀಡುವ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಲಾಗುತ್ತದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.
ತಾಲೂಕಾ ಕ್ರೀಡಾಂಗಣದಲ್ಲಿ ಭಾರತ ಸೇವಾ ಸಂಸ್ಥೆ ಆಶ್ರಯದಲ್ಲಿ ನಡೆಯುತ್ತಿರುವ ೨೦ ದಿನಗಳ ಉಚಿತ ಬೆಸಿಗೆ ಶಿಬಿರ ಕಾರ್ಯಕ್ರಮವನ್ನುದ್ದೇಸಿಸಿ ಮಾತನಾಡಿದ ಅವರು, ಬೆಸಿಗೆ ಶಿಬಿರ ಮಕ್ಕಳಿಗೆ ಹಲವು ರೀತಿಯ ಲಾಭಗಳನ್ನು ವದಗಿಸಲಿದೆ. ಶಿಬಿರದಲ್ಲಿ ಕಲೆ, ಕ್ರೀಡೆ, ಸಂಗೀತ, ನಾಟಕಕಲೆ, ನೃತ್ಯ ಸೇರಿದಂತೆ ವಿವಿಧ ಕಲೆಗಳಲ್ಲಿ ಪರಿಣಿತ ಪಡೆದ ತರಬೇತುದಾರರಿಂದ ಮಕ್ಕಳಿಗೆ ೨೦ ದಿನಗಳಕಾಲ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ. ಮಕ್ಕಳು ಎಲ್ಲರೊಂದಿಗೆ ಬೇರೆತು ಜೀವನದ ಕೌಶಲ್ಯಗಳನ್ನು ಪಡೆದು, ಶಿಸ್ತು ಸಮಯ ಪಾಲನೆ ಮಹತ್ವವನ್ನು ಅರಿಯಲು ಈ ಬೇಸಿಗೆ ಶಿಬಿರ ಮಕ್ಕಳಿಗೆ ಸಹಕಾರಿಯಾಗಿದೆ ಎಂದು ಹೇಳಿದರು.

ಶ್ರೀ ಸಂಗನಬಸವ ಸ್ವಾಮಿಗಳು ಶಿಬಿರವನ್ನು ಉದ್ಗಾಟಿಸಿ ಮಾತನಾಡಿದ ಶ್ರೀಗಳು, ಭಾರತ ಸೇವಾ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹಲವಾರು ವರ್ಷಗಳಿಂದ ತಮ್ಮ ಸೇವಾ ಸಂಸ್ಥೆ ಆಶ್ರಯದಲ್ಲಿ ಹತ್ತು ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿರುವುದು ಅವರ ಸೇವಾ ಮನೊಭಾವನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದರು.
ಗಂಗೆಭಾವಿ ೧೦ ನೇ ಕೆ.ಎಸ್.ಆರ್.ಪಿ. ಕಮಾಂಡೆಂಟ್ ನಾಗರಾಜ ಮೆಳ್ಳಾಗಟ್ಟಿ ಮಾತನಾಡಿ, ಈ ಇಪ್ಪತ್ತುದಿನಗಳಕಾಲ ನಡೆಯಲಿರುವ ಶಿಬಿರಕ್ಕೆ ಬಡ ವಿದ್ಯಾರ್ಥಿಗಳನ್ನು ಆಯ್ಕೆಮಾಡಿಕೊಂಡು, ಅವರಿಗೆ ಸೂಕ್ತ ತರಬೇತಿ ನೀಡಿ ಅವರಲ್ಲಿ ಅಡಗಿರುವ ಪ್ರತಿಬೆಯನ್ನು ಹೊರಹಾಕಿ ಪ್ರೋತ್ಸಾಹಿಸುತ್ತಿರುವ ಭಾರತ ಸೇವಾ ಸಂಸ್ಥೆಯ ಕಾರ್ಯ ಶ್ಲ್ಯಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.


ನಝಿರಹಮ್ಮದ ಶೇಕಸನದಿ, ಭರತ್ ಕಳ್ಳಿಮನಿ, ಬಸವರಾಜ ಹೊಸಪೇಟೆ, ರವಿ ಮಡಿವಾಳರ, ವಿಜಯ ಬುಳ್ಳಕ್ಕನವರ, ಶಶಿಕಾಂತ ರಾಠೋಡ, ಶಂಕರ ಧಾರವಾಡ, ಸಾಧಿಕ್ ಸವಣೂರ, ದರ್ಶನ ಕರೂರ, ಮಾಲತೇಶ ಮಾದರ ಸೇರಿದಂತೆ ಪಾಲಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *