ಮನೆಯಲ್ಲಿ ಅನುಮಾನಸ್ಪದ ಸ್ಪೋಟ ಪ್ರಕರಣ : ಚಿಕಿತ್ಸೆ ಫಲಿಸದೆ ದಂಪತಿಗಳು ಸಾವು,,, ಅನಾಥವಾದ 14 ತಿಂಗಳ ಮಗು…
ವೀರಮಾರ್ಗ ನ್ಯೂಸ್ : ಆಲೂರು : ಹಳೇಆಲೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಸುದರ್ಶನ್ (32) ಮತ್ತು ಪತ್ನಿ ಕಾವ್ಯ (27). ದಂಪತಿಯನ್ನು ಗಾಯಗೊಂಡ ತಕ್ಷಣ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಯಿತು.
ಚಿಕಿತ್ಸೆ ಫಲಕಾರಿಯಾಗದೆ ದಂಪತಿ ಸೋಮವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆದಿಂದಾಗಿ ಹದಿನಾಲ್ಕು ತಿಂಗಳ ಮಗು ಅನಾಥವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.