₹50ಲಕ್ಷಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

₹50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್

ವೀರಮಾರ್ಗ ನ್ಯೂಸ್ : ಧಾರವಾಡ : ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು ₹1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ ಕೇಳಿಬಂದಿದೆ. ಬಾಗಲಕೋಟೆ ಮೂಲದ ಡೆವಲಪರ್ ಮಂಜುನಾಥ್ ಎಂಬುವರಿಂದ ಒಂದು ಎಕರೆ ಜಮೀನಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ₹1 ಕೋಟಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮುಂಗಡವಾಗಿ ₹50 ಲಕ್ಷ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಧಾರವಾಡ ತಾಲೂಕಿನ ಯರಿಕೊಪ್ಪ ಬಳಿ ಡೆವಲಪರ್ ಜಮೀನು ಖರೀದಿಸಿದ್ದು, ಅದರಲ್ಲಿನ ‘ಅ-ಖರಾಬ್’ ತೆರವುಗೊಳಿಸಿ ಅಭಿವೃದ್ಧಿಪಡಿಸಲು ಮುಂದಾಗಿದ್ದರು ಎನ್ನಲಾಗಿದೆ. ಈ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ₹50 ಲಕ್ಷ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ವರದಿ: ಚನ್ನೇಶ್ ಕೆ ಎಂ
ಬೆಂಗಳೂರು.