ಡಿಪ್ಲೋಮಾ ಇನ್ ವಾಸ್ತು ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ ಹಿರೇಕೆರೂರ ತಾಲೂಕು : ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಇತ್ತೀಚೆಗೆ ನಡೆಸಿದ ಡಿಪ್ಲೋಮಾ ಇನ್ ವಾಸ್ತು ಪರೀಕ್ಷೆಯಲ್ಲಿ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕಿನ ವಾಸ್ತು ಸಲಹೆಗಾರರು ಹಾಗೂ ಧಾರ್ಮಿಕ ವಿದ್ವಾಂಸರಾದ ವೇ. ಶ್ರೀ ಚನ್ನೇಶ ಶಾಸ್ತ್ರಿಗಳು ಮಠದ ಅವರು ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಇವರು ಶ್ರೀ ಭಾಸ್ಕರಾಚಾರ್ಯ ಜ್ಯೋತಿರ್ವಿದ್ಯಾ ಪ್ರತಿಷ್ಠಾನ, ದಾವಣಗೆರೆ ಸಂಸ್ಥೆಯ ಮೂಲಕ ಪರೀಕ್ಷೆಗೆ ಹಾಜರಾಗಿದ್ದು, ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಸಂಸ್ಥೆ, ಗುರುಗಳು ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಾಸ್ತುಶಾಸ್ತ್ರದ ಬಗ್ಗೆ ವಿಶೇಷ ಆಸಕ್ತಿ ಮತ್ತು ನಿರಂತರ ಅಧ್ಯಯನದ ಫಲವಾಗಿ ಈ ಸಾಧನೆ ಸಾಧ್ಯವಾಗಿದ್ದು, ಅವರ ಈ ಯಶಸ್ಸಿಗೆ ಗುರುಗಳು, ಕುಟುಂಬದವರು, ಸ್ನೇಹಿತರು, ಹಿತೈಷಿಗಳು ಹಾಗೂ ವಾಸ್ತುಶಾಸ್ತ್ರಾಸಕ್ತರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ವೇ. ಶ್ರೀ ಚನ್ನೇಶ ಶಾಸ್ತ್ರಿಗಳು ಮಠದ ಅವರು ವಾಸ್ತು, ಜ್ಯೋತಿಷ್ಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಈ ಸಾಧನೆಯು ವಿದ್ಯಾರ್ಥಿಗಳಿಗೆ ಹಾಗೂ ವಾಸ್ತುಶಾಸ್ತ್ರ ಅಧ್ಯಯನ ಮಾಡುತ್ತಿರುವವರಿಗೆ ಪ್ರೇರಣೆಯಾಗಿದೆ.