ಸಾಲು ಮರದ ತಿಮ್ಮಕ್ಕ ಇನ್ನಿಲ್ಲ!!

ವೀರಮಾರ್ಗ ನ್ಯೂಸ್ : ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರುಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ.

ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದು ನೆನಪಿಸುತ್ತದೆ. ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್,

ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ. ಇನ್ನು ಇವರ ಅಗಲಿಕೆ ಕರುನಾಡು ಕಂಬನಿ ಮಿಡಿದಿದೆ.