ಕರ್ತವ್ಯ ನಿರ್ವಹಣೆಗೆ ತೆರಳಿದ್ದ ವಿಎಒ ಭುವನಾ ನಿಧನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅಧಿಕಾರಿ ಚಿಕಿತ್ಸೆ ಫಲಿಸದೆ ಕೊನೆಯುಸಿರು
ವೀರಮಾರ್ಗ ನ್ಯೂಸ್ : ತುಮಕೂರು ಜಿಲ್ಲಾ : ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಿರಾ ಪ್ರಕ್ರಿಯೆಯ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗ್ರಾಮ ಆಡಳಿತಾಧಿಕಾರಿ (VA) ಭುವನಾ ಅವರು ಚಿಕಿತ್ಸೆ ಫಲಿಸದೆ ಶನಿವಾರ ಸಂಜೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ನಿಧನರಾದರು.
ಶನಿವಾರ ಬೆಳಗ್ಗೆ ತುಮಕೂರು ತಾಲೂಕಿನ ಗೂಳೂರು ಸಮೀಪ ಬೈಕ್‌ನಲ್ಲಿ ಎಸ್‌ಐಆರ್ ಪ್ರಕ್ರಿಯೆಯ ವಿಎಒ ಸೂಪರ್‌ವೈಸರ್ ಆಗಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಕರ್ತವ್ಯ ನಿರ್ವಹಣೆಯಲ್ಲಿದ್ದ ವೇಳೆ ಸಂಭವಿಸಿದ ಈ ದುರಂತ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಭುವನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.
ವರದಿ: ಚನ್ನೇಶ್ ಕೆ ಎಂ,ಬೆಂಗಳೂರು