ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾಯಿಸಿ ಸರ್ಕಾರ ಆದೇಶ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾಯಿಸಿ ಸರ್ಕಾರ ಆದೇಶ
ವೀರಮಾರ್ಗ ನ್ಯೂಸ್ ಬೆಂಗಳೂರು :
ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಹಾಗೂ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಸಮಯವನ್ನು ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೧.೩೦ ಗಂಟೆವರೆಗೆ ಬದಲಾಯಿಸಿ ಸರ್ಕಾರ ಆದೇಶಿಸಿದೆ.
ರಾಜ್ಯ ಸರ್ಕಾರಿ ನೌಕರ ಸಂಘದ ಮನವಿ ಮೇರೆಗೆ ಈ ಜಿಲ್ಲೆಗಳ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬದಲಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಯಾವುದೇ ಲೋಪ, ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ, ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ನ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿ ಇಲ್ಲದೆ ಕರ್ತವ್ಯ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *