ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ, ಎಷ್ಟು ಕೆಜಿ ಗೊತ್ತಾ?

ಗದಗ: ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ, ಎಷ್ಟು ಕೆಜಿ ಗೊತ್ತಾ?

ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ : ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ. ಇದೀಗ ನಿಧಿ ನೋಡಲು ನೂರಾರು ಜನ ಸೇರಿದ್ದಾರೆ. ಸ್ಥಳಕ್ಕೆ ಎಡಿಸಿ ದುರ್ಗೇಶ್, ಎಸ್​ಪಿ ರೋಹನ್ ಜಗದೀಶ್, ಎಸಿ ರಂಗಪ್ಪ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ ನೀಡಿದ್ದಾರೆ. ಲಕ್ಕುಂಡಿ ಪ್ರಾಧಿಕಾರದ ಸದಸ್ಯರು, ಪುರತತ್ವ ಸಿಬ್ಬಂದಿಯಿಂದ ಪರಿಶೀಲನೆ ಮಾಡಲಾಗುತ್ತದೆ. ಪತ್ತೆಯಾದ ಚಿನ್ನಾಭರಣ ಯಾರ ಕಾಲದ್ದು ಎಂಬ ತನಿಖೆ ಕೂಡ ನಡೆಯುತ್ತಿದೆ

Edited By : L B PATIL.