ಭೀಮಾ ತೀರದ ರೌಡಿಶೀಟರ್ ತುಳಸಿರಾಮ.
ವೀರಮಾರ್ಗ ನ್ಯೂಸ್ : ವಿಜಯಪುರ : ಭೀಮಾ ತೀರದ ಕುಖ್ಯಾತ ರೌಡಿಶೀಟರ್ ತುಳಸಿರಾಮ ಹರಿಜನ್ ಬನಸೋಡೆ (27) ವಿರುದ್ಧ ವಿಜಯಪುರ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಗೂಂಡಾ ಕಾಯ್ದೆಯಡಿ ಬಂಧಿಸಿ ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸಲು ಆದೇಶ ನೀಡಲಾಗಿದೆ.
ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಈ ಆದೇಶ ಹೊರಡಿಸಿದ್ದಾರೆ. ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದವನಾದ ತುಳಸಿರಾಮ, ಪ್ರಸ್ತುತ ವಿಜಯಪುರದ ಗಣೇಶ್ ನಗರದಲ್ಲಿ ವಾಸವಾಗಿದ್ದನು.
ಆರೋಪಿತ ತುಳಸಿರಾಮ ಹರಿಜನ್ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS-2023) ಅಡಿಯಲ್ಲಿ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ಆತ ವೃತ್ತಿಪರ ಅಪರಾಧಿಯಾಗಿದ್ದು, ಸಮಾಜದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿದ್ದಾನೆ ಎಂದು ಜಿಲ್ಲಾಡಳಿತ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಅಕ್ರಮ ಕಳ್ಳಭಟ್ಟಿ ಸರಾಯಿ ವ್ಯವಹಾರ, ಮಾದಕ ದ್ರವ್ಯ ಅಪರಾಧಿಗಳು, ಜೂಜುಕೋರರು, ಗೂಂಡಾಗಳು ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವವರ ಅಪಾಯಕಾರಿ ಚಟುವಟಿಕೆಗಳ ತಡೆ ಕಾಯ್ದೆ–1985 (ಗೂಂಡಾ ಕಾಯ್ದೆ) ಅಡಿಯಲ್ಲಿ ಕ್ರಮ ಕೈಗೊಂಡು ಚಾಮರಾಜನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ರವಿ ಮೇಲಿನಕೇರಿ ಹಾಗೂ ಸುಶೀಲ್ ಕಾಳೆ ಹತ್ಯೆ ಪ್ರಕರಣದಲ್ಲಿ ಕಿಂಗ್ಪಿನ್ ಆಗಿಯೂ ತುಳಸಿರಾಮ ಹರಿಜನ್ ಹೆಸರು ಕೇಳಿಬಂದಿತ್ತು. ಇತ್ತೀಚೆಗೆ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಸಕ್ರಿಯನಾಗಿದ್ದ ಎನ್ನಲಾಗಿದೆ.
ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ತುಳಸಿರಾಮ ಹರಿಜನ್ ವಿವಿಧ ವಿಡಿಯೋಗಳನ್ನು ಹಂಚಿಕೊಂಡಿದ್ದನು. ಅಲ್ಲದೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೂಗುಚ್ಛ ನೀಡಿ ಶುಭಾಶಯ ಕೋರಿರುವ ವಿಡಿಯೋವೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಕೃಪೆ : ಫೇಸ್ ಬುಕ್.
ವೀರಮಾರ್ಗ ನ್ಯೂಸ್ : ಬೆಂಗಳೂರು : ನಗರದ ಕೊಟ್ಟಿಗೆಪಾಳ್ಯದಲ್ಲಿ ಭೀಕರ ದುರಂತ ಒಂದೇ ಕುಟುಂಬ ದ ಮೂರವನ್ನ ಕೊಂದು ತಾನು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಡ್ರೈವರ್ ಕೆಲಸ ಮಾಡುತಿದ್ದ ಪ್ರಶಾಂತ ತಾಯಿ ಮತ್ತೆ ಅಜ್ಜಿ ಮಾವ ಮೂವರನ್ನ ಮಚ್ಚಿನಿಂದ ಕೊಚ್ಚಿ ಕೊಂದು ತಾನು ಆತ್ಮಹತ್ಯೆ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸ್ರು ಭೇಟಿ ಪರಿಶೀಲನೆ ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ, ಮಾವ ಸತೀಶ್ ನ ಕೊಲೆ ಮಾಡಿರೋ ಪ್ರಶಾಂತ್
ವರದಿ: ಚನ್ನೇಶ್ ಕೆ ಎಂ
ಬೆಂಗಳೂರು